ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ…

35
firstsuddi

ನವದೆಹಲಿ: ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ರಾಜ್ಯಪಾಲೆ ತಮಿಳುಸೈ ಸೌಂದರರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಸಮಯದಲ್ಲಿ ತಮಿಳುನಾಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

2019ರ ವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷೆಯಾಗಿ ಜವಾಬ್ದಾರಿ ನಿರ್ವಹಿಸಿದ್ದ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಸರ್ಕಾರ ತೆಲಂಗಾಣಕ್ಕೆ ರಾಜ್ಯಪಾಲೆಯಾಗಿ ನೇಮಕ ಮಾಡಿತ್ತು. ಪುದುಚೇರಿಗೆ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುಸೈ ಸೌಂದರರಾಜನ್ ಸ್ಪರ್ಧಿಸಿದ್ದರು. ತೂತುಕುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೌಂದರರಾಜನ್, ಡಿಎಂಕೆ ನಾಯಕಿ ಕನ್ನಿಮೋಳಿ ವಿರುದ್ಧ ಮುಗ್ಗರಿಸಿದ್ದರು.