ಹಾವೇರಿ: ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 12 ವರ್ಷದ ಬಸವರಾಜ್ ಪವಾರ್ ಮತ್ತು 9 ವರ್ಷದ ನಾಗರಾಜ್ ಪವಾರ್ ಎಂದು ಗುರುತಿಸಲಾಗಿದೆ.
ತುಂಗಭದ್ರಾ ನದಿಯಲ್ಲಿ ಮರಳು ತುಂಬಿದ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ತಮ್ಮ ಮಕ್ಕಳ ಸಾವಿಗೆ ಅಕ್ರಮ ಮರಳುಗಾರಿಕೆ ಕಾರಣ ಎಂದು ಪೋಷಕರು ಆರೋಪಿಸಿದರು.
ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










