ಕಾಂಗ್ರೆಸ್ ಪಕ್ಷಕ್ಕೆ ಐಟಿ ಇಲಾಖೆಯಿಂದ 1,700 ಕೋಟಿ ಮೊತ್ತದ ಡಿಮ್ಯಾಂಡ್ ನೋಟಿಸ್…

40
firstsuddi

ನವದೆಹಲಿ: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ನೋಟಿಸ್‌ನ್ನು ಜಾರಿ ಮಾಡಿದೆ.

ತೆರಿಗೆ ನೋಟಿಸ್​ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್ ನೋಟಿಸ್‌ನ್ನು ಕಾಂಗ್ರೆಸ್ ಸ್ವೀಕರಿಸಿದೆ.

2017-18ರಿಂದ 2020-21ರ ಅಸೆಸ್ಮೆಂಟ್ ವರ್ಷಕ್ಕೆ ಬಾಕಿ ಉಳಿದಿರುವ ಆದಾಯ ತೆರಿಗೆ ಹಣ, ಅದಕ್ಕೆ ಬಡ್ಡಿ, ಹಾಗು ದಂಡ ಸೇರಿ ಒಟ್ಟು 1,700 ಕೋಟಿ ರೂ ಬರಬೇಕಿದೆ ಎಂದು ಈ ನೋಟಿಸ್‌ನಲ್ಲಿ ಐಟಿ ಇಲಾಖೆ ಹೇಳಿದೆ. ಆದಾಯ ತೆರಿಗೆ ಅಧಿಕಾರಿಗಳು 200 ಕೋಟಿ ರೂ. ದಂಡವನ್ನು ವಿಧಿಸಿ ಮತ್ತು ಅದರ ಹಣವನ್ನು ಸ್ಥಗಿತಗೊಳಿಸಿದ ನಂತರ ಕಾಂಗ್ರೆಸ್ ಈಗಾಗಲೇ ಹಣದ ಕೊರತೆಯನ್ನು ಎದುರಿಸುತ್ತಿದೆ. ಪ್ರಕರಣದಲ್ಲಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ತೆರಿಗೆ ಅಧಿಕಾರಿಗಳನ್ನು ವಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.