ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿ ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ: ಸಿದ್ದರಾಮಯ್ಯ.

40
firstsuddi

ಮೈಸೂರು: ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ ಅವರು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಿದ್ದಾರೆಯೇ, ಕರ್ನಾಟಕಕ್ಕೆ ಬಂದು ಮತ ಕೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಹೈಕಮಾಂಡ್ ಬಳಿ ಕರ್ನಾಟಕಕ್ಕೆ ಬರ ಪರಿಹಾರ ಕೊಡಿ ಎಂದು ಕೇಳಬೇಕಲ್ಲವೇ, ಮೇಕೆದಾಟುಗೆ ಅನುಮತಿ ಕೊಟ್ಟಿದ್ದಾರೆಯೇ, ಮಹದಾಯಿಗೆ ಪರಿಸರ ಇಲಾಖೆಯಿಂದ ಅನುಮತಿ ನೀಡಿದ್ದಾರೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆಯೇ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಪರಿಹಾರ ಕೊಟ್ಟಿದ್ದಾರೆಯೇ ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಕೇಳಿದರು.

ನಾವು ಕೇಂದ್ರ ಸರ್ಕಾರಕ್ಕೆ ಮೂರು ಮನವಿ ಪತ್ರಗಳನ್ನು ಕೊಟ್ಟೆವು. ಕೇಂದ್ರ ತಂಡ ಬಂದು ಬರ ಅಧ್ಯಯನ ನಡೆಸಿತು. ನಾನು ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೆ. ಡಿಸೆಂಬರ್ 23ನೇ ತಾರೀಖಿಗೆ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದರು. ಆದಾಗಿ 5 ತಿಂಗಳಾದರೂ ಕರ್ನಾಟಕಕ್ಕೆ ಬರ ಪರಿಹಾರಕ್ಕ ಒಂದು ರೂಪಾಯಿನೂ ನೀಡಿಲ್ಲ ಎಂದು ಆರೋಪಿಸಿದರು.

ಇದನ್ನು ಕೇಳಿದರೆ ಕುಮಾರಸ್ವಾಮಿಯವರೇ ಬಿಜೆಪಿಯ ವಕ್ತಾರರಾಗಿದ್ದಾರೆ. ಇದು 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಕೇಳಿದರು.