ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ.

46
firstsuddi

ನವದೆಹಲಿ: ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಈ ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.

ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಹಾರೈಸಿದ್ದಾರೆ.