ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತರನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ: ಜಿ. ಪರಮೇಶ್ವರ್.

36
firstsuddi

ತುಮಕೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡದಿಂದ ತನಿಖೆ ನಡೆಯುತ್ತಿದೆ. ತನಿಖೆ ಬಗ್ಗೆ ಅನೇಕ ವಿಚಾರವನ್ನು ನಮಗೆ ತಿಳಿಸಿಲ್ಲ. ಈ ಪ್ರಕರಣದ ಶಂಕಿತರನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ವಿಚಾರಣೆಗೆ ಒಳಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಆರೋಪಿಗಳಿಗೆ ಯಾರೆಲ್ಲ ಸಂಪರ್ಕದಲ್ಲಿದ್ದರೂ, ಅವರನ್ನೆಲ್ಲ ವಿಚಾರಣೆ ಮಾಡುತ್ತಿದ್ದಾರೆ. ತನಿಖೆ ಬಗ್ಗೆ ಅನೇಕ ವಿಚಾರವನ್ನು ನಮಗೆ ತಿಳಿಸಿಲ್ಲ ಎಂದು ಉತ್ತರಿಸಿದರು.

ಇದೇ ವೇಳೆ, ಲೋಕಸಭೆ ಚುನಾವಣೆ ಕುರಿತು ಮಾತನಾಡಿ, ಮುದ್ದಹನುಮೇಗೌಡ ಸೋಲು, ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ಗೆ ಸೇರಿದ್ದು, ಮಾಜಿ ಸಚಿವ ಮಾಧುಸ್ವಾಮಿ ಕಾಂಗ್ರೆಸ್‌ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ ಮತ್ತೆ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.