ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.2 ಕೋಟಿ ರೂ. ವಶಕ್ಕೆ…

38
firstsuddi

ಹುಬ್ಬಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿಗೂ ಅಧಿಕ ನಗದು ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶಿಗ್ಗಾಂವಿಯಿಂದ ಬ್ರಿಜಾ ಕಾರಿನಲ್ಲಿ ಹಣವಿದ್ದ ಬ್ಯಾಗ್​​ಗಳೊಂದಿಗೆ ಪರಾರಿಯಾಗುತ್ತಿದ್ದ ಕಾರನ್ನು ಬೆನ್ನಟ್ಟಿದ ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹಣ ತಂದವರು ತಪ್ಪಿಸಿಕೊಳ್ಳಲು ವಿಫಲ ಯತ್ನ ನಡೆಸಿದ್ದಾರೆ.

ಸದ್ಯ ಕಾರಿನಲ್ಲಿದ್ದ ಬ್ಯಾಗ್​ಗಳಲ್ಲಿ 2,02,42000 ಕೋಟಿ ಹಣ ಪತ್ತೆಯಾಗಿದೆ. ಈ ಹಣವನ್ನು ಚುನಾವಣೆಯಲ್ಲಿ ಹಂಚಲು ತರಲಾಗಿತ್ತಾ? ಅಥವಾ ಯಾವುದೋ ವ್ಯವಹಾರಕ್ಕೆ ಸಾಗಾಟ ಮಾಡಲಾಗುತ್ತಿತ್ತಾ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.