ಹಾವೇರಿ: ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನ ಮಕರವಳ್ಳಿ ಗ್ರಾಮದ ಬಳಿ ನಡೆದಿದೆ.
ಅಕ್ಕಿ ಆಲೂರು ಗ್ರಾಮದ ಮಲ್ಲೇಶಪ್ಪ ಬೆಲ್ಲದ(49) ಮೃತರು. ಸರ್ಕಾರಿ ಬಸ್ನಲ್ಲಿ ಆನವಟ್ಟಿಯಿಂದ ಹಾನಗಲ್ಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










