ಮಲ್ಪೆ ಬೀಚ್ ನಲ್ಲಿ ಮುಳುಗಿ ಮಂಡ್ಯ ಮೂಲದ ಪ್ರವಾಸಿಗ ಸಾವು…

39
firstsuddi

ಉಡುಪಿ: ಪ್ರವಾಸಕ್ಕೆ ಬಂದ ಮಂಡ್ಯ ಮೂಲದ ಯುವಕನೋರ್ವ ಮಲ್ಪೆ ಬೀಚ್ ನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ  ನಡೆದಿದೆ.

ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ, ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಐದು ಮಂದಿ ಮಲ್ಪೆ ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ಮಧ್ಯಾಹ್ನ ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರೆನ್ನಲಾಗಿದೆ.

ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರು ದಾರಿಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.