ಹಿರಿಯ ಪತ್ರಕರ್ತ ಅರ್ಜುನ್ ದೇವ್ ವಿಧಿವಶ- ಸಿಎಂ ಸಂತಾಪ…

47
firstsuddi

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅರ್ಜುನ್ ದೇವ್ ಅವರು ‘ಪ್ರಜಾವಾಣಿ’, ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. 

ಅರ್ಜುನ್ ದೇವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. “ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ ಅವರ ನಿಧನದ ಸುದ್ದಿ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.