ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದ್ದು. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಪರಿಣಾಮವಾಗಿ ನೆಲ್ಲಿಬೀಡು, ಕಟ್ಟೆಮನೆ, ಅಜ್ಜಿಗದ್ದೆ, ಆರೋಳ್ಳಿ, ಕೋಣೆಮನೆ ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಸ್ತೆ ಸಂಪರ್ಕವಿಲ್ಲದೆ ಹಲವು ಗ್ರಾಮಗಳ ಜನರು ಪರದಾಡುವಂತಾಗಿದೆ. ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿದುಕೊಂಡ ಪರಿಣಾಮ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಅನಾರೋಗ್ಯಪಿಡಿತೆ ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸಲು ಕುಟುಂಬಸ್ಥರು ಪರದಾಡುವಂತಾಯಿತು. ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡೇ ಸಾಗಿಸಿದ ಗ್ರಾಮಸ್ಥರು ಕಳಸ ತಾಲೂಕು ಸರ್ಕಾರಿ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಿ ಚಿಕಿತ್ಸೆಯನ್ನು ಕೋಡಿಸಿದ್ದಾರೆ. ಈ ಭಾಗದಲ್ಲಿ ಸಮರ್ಪಕ ಸೇತುವೆ ನಿರ್ಮಿಸಿಕೊಡುವಂತೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರು ಯಾವೋಬ್ಬ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಲೆಕೇಡಿಸಿಕೊಂಡಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










