ಅತ್ಯಾಚಾರ ಪ್ರಕರಣ ಸಿಲುಕಿಕೊಂಡಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ.

35

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ. ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ ರೇವಣ್ಣಗೆ ಭಾರಿ ನಿರಾಸೆ ಉಂಟಾಗಿದೆ.