ಬೆಂಗಳೂರು ನಗರದ ಬಾಬುಸಪಾಳ್ಯ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 9ಕ್ಕೆ ಏರಿಕೆ.

33

ಬೆಂಗಳೂರು: ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಎರಿಕೆಯಾಗಿದೆ. ಇಂದು ಬೆಳಗ್ಗೆ ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಏಳುಮಲೈ ಎಂಬ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕಟ್ಟಡ ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.
ಬೆಂಗಳೂರು ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಪಾಳ್ಯದಲ್ಲಿ ನಡೆದಿತ್ತು. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಹಾಗೂ ಪೊಲೀಸರು ಕಳೆದ ಮೂರು ದಿನಗಳಿಂದ ಸತತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿಯ ಪುತ್ರ ಭುವನ್ ರೆಡ್ಡಿಯನ್ನು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ ಕಟ್ಟಡದ 4ನೇ ಅಂತಸ್ತಿನವರೆಗೂ ನಿರ್ಮಾಣದ ಜವಾಬ್ದಾರಿ ವಹಿಸಿದ್ದ ಗುತ್ತಿಗೆದಾರ ಮುನಿಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.