ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ.

30

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರ ಮನೆಗೆ ಇಂದು ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಧನಕರ್ ಪತ್ನಿ ಭೇಟಿ ನೀಡಿದರು. ಬೆಂಗಳೂರಿನಲ್ಲಿರುವ ಹೆಚ್‍ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗೂ ಅವರ ತಂದೆ ಹೆಚ್‍ಡಿ.ದೇವೇಗೌಡ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್‍ಡಿ ದೇವೇಗೌಡ ಮತ್ತು ಹೆಚ್‍ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿದರು. ನಂತರ ಜಗದೀಪ್ ಧನಕರ್ ಅವರ ಜೊತೆ ಗೌಡರ ಕುಟುಂಬ ಸದಸ್ಯರು ಫೋಟೊ ತೆಗೆಸಿಕೊಂಡರು.
ಶುಕ್ರವಾರ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಅಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು.