ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಗೌರವಿಸುತ್ತೇನೆ ಎಂದ ಡಿಕೆ.ಶಿವಕುಮಾರ್.

30

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಆರೋಗ್ಯ ಸಮಸ್ಯೆ ಕಾರಣ ಇಂದು ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‍ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.