ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡುತ್ತಿದ್ದಾರೆ: ಆರ್ ಅಶೋಕ್ ಆರೋಪ.

29

ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಆದರೆ ಈಗ ಅಬಕಾರಿ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಇಂದು ಆರೋಪಿಸಿದ್ದಾರೆ. ರಾಜ್ಯ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ಮದ್ಯದಂಗಡಿಗಳಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಅಬಕಾರಿ ಸಚಿವರ ಹಫ್ತಾ ವಸೂಲಿ ಬಗ್ಗೆ ಅನೇಕ ಮದ್ಯದಂಗಡಿ ಮಾಲೀಕರೇ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್‌ಗಳಿವೆ ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದರು.