ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

30
**EDS: IMAGE VIA KARNATAKA CMO** Mysuru: Karnataka Chief Minister Siddaramaiah speaks with the media outside his residence, in Mysuru, Karnataka, Saturday, Sept. 28, 2024. (PTI Photo)(PTI09_28_2024_000150B)

ಬೆಂಗಳೂರು: ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಕುರಿತಂತೆ ಚರ್ಚೆಗಳಾಗಿದ್ದು, ಸಚಿವ ಸಂಪುಟ ಪುನರಾಚನೆ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ನೋಡೋಣ ಎಂದಿದ್ದೇನೆ. ಅದನ್ನೇ ಸಂಪುಟ ಪುನಾರಚನೆ ಎಂದು ಬಿಂಬಿಸಬೇಡಿ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ನಾಯಜರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಿಯೂ ಅದನ್ನೇ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್-19 ವೇಳೆ ನಡೆದ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆಂದು ಪ್ರಶ್ನಿಸಿದರು. ಪ್ರಧಾನಿ ಮೋದಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಟಾರ್ಗೆಟ್. ಕರ್ನಾಟಕ ಅತಿ ದೊಡ್ಡ ರಾಜ್ಯ. ಇಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮಲ್ಲಿ ಯಾವ ಭ್ರಷ್ಟಾಚಾರವೂ ಇಲ್ಲ. ಭ್ರಷ್ಟಾಚಾರ ನಡೆಯುವುದಕ್ಕೂ ಬಿಡುವುದಿಲ್ಲ ಎಂದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ರಾಜಕೀಯವನ್ನೇ ಬಿಡುತ್ತೇನೆ. ಒಂದೇ ಒಂದು ಪೈಸೆ ಭ್ರಷ್ಟಾಚಾರ ಮಾಡಿದ್ದರೆ ರಾಜಕೀಯ ಬಿಡುತ್ತೇನೆ. ಮೋದಿ ಪ್ರಧಾನಿ ಸ್ಥಾನ ತ್ಯಜಿಸುತ್ತಾರಾ ಕೇಳಿ ಎಂದು ವಾಗ್ದಾಳಿ ನಡೆಸಿದರು.