ಇಂದಿರಾ ಗಾಂಧಿ ಮರಳಿ ಬಂದರೂ 370ನೇ ವಿಧಿ ಮರು ಜಾರಿಯಾಗಲ್ಲ- ಅಮಿತ್ ಶಾ.

41

ಧುಲೆ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಇಂದಿರಾ ಗಾಂಧಿ ಮರಳಿ ಬಂದರೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ಮರು ಜಾರಿಯಾಗಲ್ಲ ಎಂದರು. ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಮುಸ್ಲೀಂಮರಿಗೆ ಮೀಸಲಾತಿ ನೀಡಬೇಕಾದರೆ ಎಸ್‍ಸಿ, ಎಸ್‍ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಶಾ ಹೇಳಿದರು. ಕೆಲವು ದಿನಗಳ ಹಿಂದೆ ಉಲೇಮಾಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದಿದ್ದರು.