ಹಸಿರು ಆಂದೋಲನ: ನಮ್ಮ ಮೆಟ್ರೊಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ.

31

ಬೆಂಗಳೂರು: ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್, ನಿರ್ದೇಶಕ ಡಿ.ಆರ್.ಕೆ. ರೆಡ್ಡಿ, ಹಿರಿಯ ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಯು ಭಾರತೀಯ ಹಸಿರು ಕಟ್ಟಡ ಮಂಡಳಿ ನೀಡಿದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ನಮ್ಮ ಮೆಟ್ರೊ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಕ್ಷೇತ್ರಗಳಲ್ಲಿ ಹಸಿರು ಉತ್ತೇಜಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಯತ್ನಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.