ರೇಷನ್ ಕಾರ್ಡ್ ರದ್ದತಿ; ಯಾರಿಗೆ ಗೃಹಲಕ್ಷ್ಮೀ ಹಣ ಬರುತ್ತೆ, ಯಾರಿಗೆ ಬರಲ್ಲ ಎಂಬ ಗೊಂದಲಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ.

45

ಬೆಳಗಾವಿ: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟೊದಿಲ್ಲವೋ ಅಂತವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಸ್ಪಷ್ಟಪಡಿಸಿದರು. ಎಪಿಎಲ್ ಕಾರ್ಡ್ ಇದ್ದವರಿಗೂ ಗೃಹಲಕ್ಷ್ಮೀ ಹಣ ಬರುತ್ತದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. 80 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನ ರದ್ದತಿ ಮಾಡುವ ಬದಲು ಎಪಿಎಲ್‍ಗೆ ವರ್ಗಾಯಿಸಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್-ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದರು.