ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: 3 ಕ್ಷೇತ್ರಗಳಲ್ಲೂ ನಮ್ಮದೇ ಗೆಲುವು ಎಂದ ಸಿ.ಎಂ.ಸಿದ್ದರಾಮಯ್ಯ.

68

ಬೆಂಗಳೂರು: ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಇನ್ನು ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ, ಈ ನಡುವೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ನಡುವೆ ಸುದ್ದಿಗಾರರೊಂದಿಗೆ ಚುನಾವಣೋತ್ತರ ಸಮೀಕ್ಷೆ ಕುರಿತು ಮಾತನಾಡಿದರು.