ಬಾಣಂತಿಯರ ಸಾವು ಪ್ರಕರಣ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ: ದಿನೇಶ್ ಗುಂಡೂರಾವ್.

22

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ 327 ಬಾಣಂತಿಯರ ಸಾವಾಗಿದೆ. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ” ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲವನ್ನೂ ಪರಿಶೀಲಿಸಿ ಎಂದು ಸೂಚನೆ ನೀಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು, ಈ ರೀತಿಯ ಘಟನೆಗಳು ಮರುಕಳಿಸಬಾರದು ಎಂದರು. ಬಳ್ಳಾರಿಯಲ್ಲಿ 9 ಮಹಿಳೆಯರಿಗೆ ಸಮಸ್ಯೆ ಆಗಿತ್ತು. ನಾಲ್ವರು ಈಗಾಗಲೇ ತೀರಿಕೊಂಡಿದ್ದರು. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ಮೃತರಾಗಿದ್ದಾರೆ. ಅದೇ ಬ್ಯಾಚ್‍ನ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕೊಡಲಾಗಿತ್ತು. ಈಗಾಗಲೇ ಕಂಪನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಮಾಹಿತಿ ನೀಡಿದರು. ಕಂಪನಿಯಿಂದ ದ್ರಾವಣ ಸರಬರಾಜು ಆಗಿತ್ತು. ಕಂಪನಿಯ ಬೇರೆ ಪ್ರಾಡಕ್ಟ್ ರದ್ಧು ಮಾಡಿದ್ದೇವೆ. ಪಶ್ಚಿಮ ಬಂಗಾಳ ಕಂಪನಿಯದು, ಅದರ ಟೆಸ್ಟ್ ವರದಿ ಬಂದಿದೆ. ಅವರು ಸೆಂಟ್ರಲ್ ಲ್ಯಾಬ್‍ಗೆ ಹೋಗಿದ್ದರು. ಅಲ್ಲಿ ಏನೂ ಸಮಸ್ಯೆ ಇಲ್ಲ ಅಂತ ಬಂದಿತ್ತು. ರೋಗಿ ವೆಂಟಿಲೇಟರ್‌ನಿಂದ ಹೊರ ಬಂದಿದ್ದರು. ವಾಕ್ ಕೂಡ ಮಾಡುತ್ತಿದ್ದರು. ಆಂಟಿಬಯೋಟಿಕ್ ಕೂಡ ನಿಲ್ಲಿಸಿದ್ದರು. ಚೇತರಿಸಿಕೊಳ್ಳುತ್ತಿದ್ದ ಅವರು ಸಾವನ್ನಪ್ಪಿರುವುದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.