ರಾಮನಗರ: ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವುದಕ್ಕೆ ಯಡಿಯೂರಪ್ಪನವರು ಯಾವುದೇ ಸಣ್ಣ ಸಾಕ್ಷ್ಯ ನೀಡಿದರೂ ಕೂಡ ನೇರ ಕ್ರಮ ಕೈಗೊಳ್ಳಲಾಗುವುದು, ಕೇಂದ್ರದಲ್ಲಿ ಅವರದ್ದೇ ಸರಕಾರ ಇದೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಯಾರ ಯಾರ ಫೋನ್ ಕದ್ದಾಲಿಕೆ ಆಗುತ್ತಿದೆ ಎಂಬುವುದನ್ನು ತನಿಖೆ ನಡೆಸಲು ಅವಕಾಶವಿದ್ದು, ತನಿಖೆ ನಡೆಸಲಿ. ನಾನು ಯಾರ ಫೋನ್ ನನ್ನು ಕದ್ದಾಲಿಕೆ ಮಾಡಿಲ್ಲ. ನಾನು ಅಂತಹ ಸಂಸ್ಕೃತಿಯಿಂದ ಬಂದವನಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .










