ಪಾಕಿಸ್ತಾನ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಅದ್ಭುತ ಬ್ಯಾಟಿಂಗ್ ಮತ್ತು ಶಾಹೀನ್ ಶಾ ಅಫ್ರಿದಿ ಮತ್ತು ನಸೀಮ್ ಶಾ ಅವರ ಅತ್ಯುತ್ತಮ ಬೌಲಿಂಗ್ ಸಹಾಯದಿಂದ ಈ ಗೆಲುವು ಸಾಧಿಸಲಾಗಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ಏಕದಿನ ಸರಣಿ ಗೆದ್ದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನೂ ಗೆದ್ದುಕೊಂಡಿರುವ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಉಭಯ ತಂಡಗಳ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ. ಅಂದರೆ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಇನ್ನು ಮೂರನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಸೋತರೂ ಸರಣಿ ತನ್ನದಾಗಿಸಿಕೊಳ್ಳಲಿದೆ. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಏಕದಿನ ಸರಣಿ ಗೆದ್ದಿರುವ ಪಾಕಿಸ್ತಾನ ಇದೀಗ ಹರಿಣಗಳ ನಾಡಲ್ಲಿ ಅತಿ ಹೆಚ್ಚು ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ಏಷ್ಯಾದ ಮೊದಲ ದೇಶ ಎಂಬ ದಾಖಲೆ ಬರೆದಿದೆ. ಪಾಕಿಸ್ತಾನ 11 ವರ್ಷಗಳ ಹಿಂದೆ ಅಂದರೆ 2013ರಲ್ಲಿ ನಡೆದಿದ್ದ ಮೊದಲ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿತ್ತು. ಅದರ ನಂತರ, 2021 ರಲ್ಲಿ ಎರಡನೇ ಬಾರಿಗೆ ಏಕದಿನ ಸರಣಿಯನ್ನು ಗೆದ್ದುಕೊಂಡಿತು. ಈಗ 2024 ರಲ್ಲಿ ಮೂರನೇ ಏಕದಿನ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಮೂರು ಏಕದಿನ ಸರಣಿಗಳನ್ನು ಗೆದ್ದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಪಾತ್ರವಾಗಿದೆ.










