ಚಾಟಿಯಿಂದ ಹೊಡೆದುಕೊಂಡು ಪ್ರತಿಭಟಿಸಿದ ಅಣ್ಣಾಮಲೈ.

28
Tamil Nadu BJP chief K Annamalai | X

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಕೊಯಮತ್ತೂರಿನ ಕಾಲಪಟ್ಟಿ ರಸ್ತೆಯಲ್ಲಿರುವ ಅವರ ಮನೆಯಲ್ಲಿ ತಮಗೆ ತಾವೇ ಚಾಟಿ ಏಟನ್ನು ಕೊಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಹಸಿರು ಧೋತಿ ಧರಿಸಿ, ಟಾಪ್ ಶರ್ಟ್ ಹಾಕದ ಮನೆಯಿಂದ ಹೊರಗೆ ಬರುತ್ತಿದಂತೆ ಅಣ್ಣಾಮಲೈ, ಹಗ್ಗದಿಂದ ಮಾಡಿದ ಚಾವಟಿಯಿಂದ ಚಾಟಿ ಬೀಸಿಕೊಂಡು ತಮ್ಮ ದೇಹವನ್ನು ಶಿಕ್ಷೆಗೆ ಒಳಪಡಿಸಿಕೊಂಡಿದ್ದಾರೆ. 6 ಬಾರಿ ಚಾಟಿಯಿಂದ ಹೊಡೆದುಕೊಂಡು ತಮ್ಮ ದೇಹವನ್ನು ದಂಡನೆಗೆ ಒಳಪಡಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ 7ನೇ ಬಾರಿ ಚಾಟಿ ಬೀಸುತ್ತಿದ್ದಾಗ ಬಿಜೆಪಿ ಸದಸ್ಯರು ತಡೆದಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್‍ಐಆರ್ ಸೋರಿಕೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ದೇವರಿಗೆ ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಈ ರೀತಿ ಚಾಟಿ ಬೀಸುವ ಪ್ರತಿಭಟನೆಯನ್ನು ಕೈಗೆತ್ತಿಕೊಂಡಿದ್ದೇನೆ ಎಂದು ಅಣ್ಣಾಮಲೈ ಹೇಳಿದರು. ಹಾಗೂ ನಾನು ನಿನ್ನೆ ನನ್ನ ಕಾಲುಗಳಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಹೇಳಿದ್ದೆ ಅದರಂತೆ ಅವುಗಳನ್ನು ತೆಗೆದಿದ್ದೇನೆ ಎಂದು ಇದೇ ವೇಳೆ ಅಣ್ಣಾಮಲೈ ತಿಳಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷರು ಡಿಎಂಕೆಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ಶೂ ಧರಿಸುವುದಿಲ್ಲ ಎಂದು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ತಮಿಳುನಾಡಿನಾದ್ಯಂತ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.