ಕೆಲಸದ ಸಮಯದಲ್ಲೇ ಅರಣ್ಯ ಇಲಾಖೆಯ ನೌಕರ ಬ್ರೈನ್‍ಸ್ಟ್ರೋಕ್‍ಗೆ ಬಲಿ.

31
closeup of the feet of a dead body covered with a sheet, with a blank tag tied on the big toe of his left foot, in monochrome, with a vignette added

ಚಾಮರಾಜನಗರ: ಬ್ರೈನ್‍ಸ್ಟ್ರೋಕ್‍ನಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರ ಮೃತಪಟ್ಟಿದ್ದಾರೆ. ಈ ಘಟನೆ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗೋಪಾಲಪುರದ ಮಹೇಶ್ ಎಂದು ಗುರುತಿಸಲಾಗಿದೆ. ಅವರು ಕಳೆದ 28 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದರು. ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಬ್ರೈನ್‍ಸ್ಟ್ರೋಕ್ ಆಗಿದೆ. ತಕ್ಷಣ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮೃತ ನೌಕರನ ಕುಟುಂಬಕ್ಕೆ ಅರಣ್ಯ ಇಲಾಖೆ ನಿಯಮಾನುಸಾರ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಮೃತನ ಕುಟುಂಬಸ್ಥರು ಕೆಲ ಸಮಯ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.