ಮೈಸೂರಿನಿಂದ ಲಕ್ನೋಗೆ ಕುಂಭಮೇಳಕ್ಕಾಗಿ ವಿಶೇಷ ರೈಲು ವ್ಯವಸ್ಥೆ.

27

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‍ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ಸಂಖ್ಯೆಯನ್ನು ಪೂರೈಸಲು ನೈರುತ್ಯ ರೈಲ್ವೆಯಿಂದ ಏಕಮುಖ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಲಾಗಿದೆ. ಮೈಸೂರು-ಲಕ್ನೋ ಜಂಕ್ಷನ್ ಏಕಮುಖ ಸ್ಪೆಷಲ್ ಎಕ್ಸ್ ಪ್ರೆಸ್ ಡಿಸೆಂಬರ್ 29 ರಂದು ರಾತ್ರಿ 12:30 ಕ್ಕೆ ಮೈಸೂರಿನಿಂದ ಹೊರಟು ಡಿಸೆಂಬರ್ 31 ರಂದು ಬೆಳಗ್ಗೆ 4 ಗಂಟೆಗೆ ಲಕ್ನೋ ಜಂಕ್ಷನ್ ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‍ಆರ್ ಬೆಂಗಳೂರು, ಯಶವಂತಪುರ ಜಂಕ್ಷನ್, ತುಮಕೂರು, ಅರಸೀಕೆರೆ ಜಂಕ್ಷನ್, ಕಡೂರು, ಚಿಕ್ಕಜಾಜೂರು ಜಂಕ್ಷನ್, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಜಂಕ್ಷನ್, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್ ಜಂಕ್ಷನ್, ಸಾಂಗ್ಲಿ, ಕರಡ್, ಪುಣೆ ಜಂಕ್ಷನ್, ದೌಂಡ್ ಕಾರ್ಡ್ ಲೈನ್, ಅಹ್ಮದ್ನಗರ, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಖಾಂಡ್ವಾ, ತಲ್ವಾಡಿಯಾ, ಭೋಪಾಲ್, ಖಾಂಡ್ವಾ, ತಲ್ವಾಡಿಯಾ, ಚನೇರಾ, ಖಾಂಡ್ವಾ, ತಲ್ವಾಡ್ಯ, ಚನೇರಾ, ಖಾಂಡ್ವಾ ನಿಲ್ದಾಣಗಳಲ್ಲಿ ನಿಲ್ಲಿಸಲ್ಲಿದ್ದು, ಪ್ರಯಾಣಿಕರು ಸೇವೆಯನ್ನ ಬಳಸಿಕೊಳ್ಳಬಹುದಾಗಿದೆ ಎಂದು ವರದಿ ತಿಳಿದುಬಂದಿದೆ.