ಬೆಂಗಳೂರು: ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆಯನ್ನು ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಬೀದರ್‍ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿಯು ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡುವಂತೆ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಪ್ರಿಯಾಂಕಾ ಖರ್ಗೆ ಯಾರೆಷ್ಟೇ ಕೂಗಾಡಿದರು, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಯಾವುದಾದರೂ ದಾಖಲೆ ಇದ್ದರೆ ತೋರಿಸಲಿ ಎಂದು ಹೇಳಿದರು. ನನ್ನ ರಾಜೀನಾಮೆ ಕೇಳಲು ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರಾ ಏನು ಸುಪ್ರೀಂಕೋರ್ಟಾ ಎಂದರು. ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ ಎಂದು ಹೇಳಿದರು. ರಾಜು ಕಪನೂರು ಕಾಂಗ್ರೆಸ್ ಸೇರುವ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್‍ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದು ತಿಳಿಸಿದರು. ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ, ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರುತ್ತೀರಿ ಅಂತಾ ಮೊದಲೇ ತಿಳಿಸಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡುತ್ತೇವೆ, ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡುತ್ತೀರ ಎಂದು ತಿಳಿಸಿದರು. ಬಿಜೆಪಿಯಲ್ಲೇ ಬಿ.ವೈ ವಿಜಯೇಂದ್ರ ಅವರ ಮಾತಿಗೆ ಕಿಮ್ಮತ್ತಿಲ್ಲ, ಉಳಿದವರು ಯಾಕೆ ಅವರ ಮಾತಿಗೆ ಕಿಮ್ಮತ್ತು ಕೊಡಬೇಕು ಎಂದು ಪ್ರಶ್ನೆ ಹಾಕಿದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್‍ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬೀದರ್‍ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 27 ರಂದೇ ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವ ಡಾ. ಪರಮೇಶ್ವರ್ ರವರಿಗೆ ಪತ್ರ ಬರೆದಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.










