ತಮಿಳುನಾಡು: ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಮತ್ತೊಂದು ದುರಂತ ನಡೆದಿದೆ. ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ನಡೆದ ಸ್ಫೋಟದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಲಾಗಿದೆ. ಪಟಾಕಿ ತಯಾರಿಕೆಯ ವೇಳೆಯಲ್ಲಿ ರಾಸಾಯನಿಕ ಬೆರೆಸುವ ಪ್ರಕ್ರಿಯೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದಿದೆ. ಇದರಿಂದ ಕಾರ್ಖಾನೆಯ 1 ಕೊಠಡಿ ಧ್ವಂಸವಾಗಿದೆ. ಬೆಂಕಿ ಹೊತ್ತಿಕೊಂಡ ಕಾರಣದಿಂದಾಗಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದಿದೆ.










