ರಾಜ್ಯದ ಜನತೆಗೆ ಮತ್ತೊಂದು ಬೆಲೆ ಹೆಚ್ಚಳದ ಬರೆ.

33

ಬೆಂಗಳೂರು: ಸಾರಿಗೆ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು, ಹಾಲಿನ ಬೆಲೆ ಏರಿಕೆ ಮಾಡಬೇಕು ಎಂದು ರೈತರ ಒತ್ತಾಯ ಮಾಡಿದ್ದಾರೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ದರ ಹೆಚ್ಚಳವಾಗಿದ್ದು, ಈ ಹಿನ್ನೆಲೆ ಹಾಲಿನ ಬೆಲೆ ಲೀಟರಕ್’ಗೆ ರೂಪಾಯಿ 8 ರಿಂದ 10 ರೂಪಾಯಿ ಹೆಚ್ಚಳ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ನಂತರ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದು, ದಿನೇ ದಿನೇ ಹಾಲಿನ ಉತ್ಪಾದನೆ ಏರಿಕೆ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 10 ರೂಪಾಯಿ, 5 ರೂಪಾಯಿ, 3 ರೂಪಾಯಿ ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.