ಕರ್ನಾಟಕ ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಅನುಮಾನ: ಕೆ ಅಣ್ಣಾಮಲೈ.

34

ಮಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ಶರಣಾಗತಿ, ಎನ್‍ಕೌಂಟರ್ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ರಾಜಕೀಯ ಮೈಲೇಜ್ ಪಡೆಯಲು ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ದೂಷಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದೆ ತಾನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗಲೂ ನಕ್ಸಲರು ಶರಣಾಗಿದ್ದರು, ನಕ್ಸಲ್ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭದಲ್ಲಿ ಕೆಲವೊಂದು ನಿಯಮಗಳಿರುತ್ತವೆ. ಆದರೆ, ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿ ಸ್ವಲ್ಪ ಅನುಮಾನ ಮೂಡಿಸುತ್ತಿದೆ. ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್‍ಕೌಂಟರ್‍ನಲ್ಲೂ ಸಹ ಅನುಮಾನವಿದೆ. ಎನ್‍ಕೌಂಟರ್ ಆದ ತಕ್ಷಣ ನಕ್ಸಲ್ ಶರಣಾದರು ಎಂದು ಸರ್ಕಾರ ಹೇಳುತ್ತಿದೆ. ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು ಎಂಬುದು ತಿಳಿದಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡುತ್ತಿದೆಯೇ, ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಅಣ್ಣಾಮಲೈ ಅವರು ಹೇಳಿದರು.