ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ ‘ಮಾರ್ಕೊ’.

43

ಮಲಯಾಳಂ ಚಿತ್ರರಂಗದಲ್ಲಿ ಮಾರ್ಕೊ ಸಿನಿಮಾ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದಾಗಿದೆ. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್‍ನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಮೊದಲು ಮೂಲ ಭಾಷೆಯಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಆ ನಂತರ ಈ ಚಿತ್ರವನ್ನು ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲೂ ರಿಲೀಸ್ ಮಾಡಲಾಯಿತು. ಈಗ ಚಿತ್ರದ ಕನ್ನಡ ವರ್ಷನ್ ರಿಲೀಸ್‍ಗೆ ದಿನಾಂಕ ಫಿಕ್ಸ್ ಆಗಿದೆ. ಉನ್ನಿ ಮುಕುಂದನ್ ನಟನೆಯ ಮಾರ್ಕೊ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ಜ.31ರಂದು ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂಬ ವರದಿ ನೀಡಲಾಗಿದೆ. ಈ ಚಿತ್ರ ಸ್ಯಾಂಡಲ್‍ವುಡ್ ಬಾಕ್ಸ್ ಆಫೀಸ್‍ನಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರ ‘ಂ’ ಸರ್ಟಿಫಿಕೇಟ್ ಪಡೆದುಕೊಂಡಿದ್ದು, ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ. ಈ ಕಾರಣಕ್ಕೆ ಒಂದು ವರ್ಗದ ಪ್ರೇಕ್ಷಕರು ಇದನ್ನು ಇಷ್ಟಪಟ್ಟಿಲ್ಲ. ಈ ಸಿನಿಮಾದಲ್ಲಿ ಅತಿಯಾದ ಹಿಂಸೆ ತೋರಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.