ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‍ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತಿಳಿದುಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಕುರಿತು ಮುಂದೇನು ಮಾಡಬೇಕೆಂಬುದರ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹೇಳಲಾಗಿದೆ. ಲೋಕಾಯುಕ್ತ ಎಸ್‍ಪಿ ಟಿಜೆ ಉದೇಶ್ ನೇತೃತ್ವದಲ್ಲಿ ವಿಚಾರಣೆ ನಡೆದು ಮಾಹಿತಿಯನ್ನು ಸಿದ್ಧಪಡಿಸಲಾಗಿದೆ. ಮುಡಾ ಹಗರಣದ ತನಿಖಾ ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‍ಗೆ ಸಲ್ಲಿಕೆ ಮಾಡಲಿದ್ದಾರೆ.










