ಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ನೋಟಿಸ್.

47

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್‍ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು ನಡೆದಿದೆ. ಈ ವೇಳೆ ಸುಪ್ರೀಂಕೋರ್ಟ್ 7 ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾರೆ. ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ವಿಚಾರಣೆಯನ್ನು ಮುಂದೂಡಿದೆ.