ಚಿಕ್ಕಮಗಳೂರು: ಮಂಗನ ಕಾಯಿಲೆ ರೋಗ ಚಿಕ್ಕಮಗಳೂರು ಜಿಲ್ಲೆಯ ಜನರನ್ನು ಬೆಂಬಿಡದೆ ಕಾಡುತ್ತಿದೆ. ಮತ್ತೆ ಇಬ್ಬರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಮಂಗನ ಕಾಯಿಲೆ ರೋಗ) ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಕೆಯಾಗಿದೆ. ಎನ್ಆರ್ಪುರ ತಾಲೂಕಿನ ಮೂರು ಮಂದಿಯಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಒಬ್ಬನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ. ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಮಂಗನ ಕಾಯಿಲೆ ಸೋಂಕು ಲಕ್ಷಣ ಕಂಡುಬಂದವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್ಗೆ ರವಾನಿಸಿದ್ದಾರೆ.










