ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿವಾಗಿ ಇಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, 10 ವರ್ಷಗಳಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದು ಹೇಳಿದ್ದಾರೆ. 2014 ರಿಂದ, ಇದು ಮೊದಲ ಸಂಸತ್ ಅಧಿವೇಶನವಾಗಿದ್ದು, ನಮ್ಮ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪ ಕಂಡುಬಂದಿಲ್ಲ ಮತ್ತು ಇದರಲ್ಲಿ ಯಾವುದೇ ವಿದೇಶಿ ಶಕ್ತಿಗಳಿಲ್ಲ. ಪ್ರತಿ ಬಜೆಟ್ ಅಧಿವೇಶನಕ್ಕೂ ಮುನ್ನ ನಾನು ಇದನ್ನು ಗಮನಿಸಿದ್ದೇನೆ ಎಂದು ಮೋದಿ ಹೇಳಿದರು. 2014ರಿಂದಲೂ ಯಾವುದಾದರೂ ಒಂದು ವಿಚಾರವನ್ನಿಟ್ಟುಕೊಂಡು ತೊಂದರೆ ಸೃಷ್ಟಿಸಲು ಕೆಲವರು ಸಿದ್ಧರಿರುತ್ತಿದ್ದರು. ಆದರೆ 10 ವರ್ಷಗಳ ಬಳಿಕ ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ಅಧಿವೇಶನ ನಡೆಯುತ್ತಿದೆ. ಈ ಬಜೆಟ್ ಅಧಿವೇಶನವು ನಮ್ಮ ಗುರಿಯಾದ ವಿಕಸಿತ ಭಾರತವನ್ನು ಸಾಧಿಸುವಲ್ಲಿ ಹೊಸ ಆತ್ಮವಿಶ್ವಾಸ ಮತ್ತು ಶಕ್ತಿಯನ್ನು ತುಂಬುತ್ತದೆ ಎಂದು ನಾನು ವಿಶ್ವಾಸದಿಂದ ಹೇಳುತ್ತೇನೆ. ದೇಶವಾಸಿಗಳು ಒಟ್ಟಾಗಿ ನಾವು ಈ ನಿರ್ಣಯವನ್ನು ಪ್ರಯತ್ನದಿಂದ ಈಡೇರಿಸುತ್ತೇವೆ. ನಾವೀನ್ಯತೆ, ಸೇರ್ಪಡೆ ಮತ್ತು ಹೂಡಿಕೆಯು ಇದು ನಮ್ಮ ಆರ್ಥಿಕ ಚಟುವಟಿಕೆಗಳಿಗೆ ಮಾರ್ಗಸೂಚಿಯ ಆಧಾರವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.










