ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ.

30

ಬೆಂಗಳೂರು: ಬೆಂಗಳೂರು ಪೂರ್ವದ ಪುಲಿಕೇಶಿ ನಗರ ವಾರ್ಡ್‍ನ ಪ್ರೊಮೆನೇಡ್  ರಸ್ತೆಯ ಸುಮಾರು 30ಕ್ಕೂ ಹೆಚ್ಚು ನಿವಾಸಿಗಳು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವುದಾಗಿ ಇಂದು ತಿಳಿದುಬಂದಿದೆ. ಕಲುಷಿತ ನೀರು ಸೇವಿಸಿ ಕಳೆದೆರಡು ವಾರಗಳಿಂದ 30 ಜನರು ಅಸ್ವಸ್ಥರಾಗಿದ್ದಾರೆ. ಈ ಸಂಬಂಧ ಸ್ಥಳೀಯರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗಿದ್ದು, ಇದೀಗ ಸ್ಥಳೀಯರು ಬಿಬಿಎಂಪಿ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದಾರೆ. ಈ ವಿಚಾರ ತಿಳಿದ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಬ್ಲ್ಯೂಎಸ್‍ಎಸ್‍ಬಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.