ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್.

19

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‍ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾಯ ಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇನ್ನು ತೀರ್ಪು ಪ್ರಕಟವಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವೆ. ನಮಗೆ ಲೋಕಾಯುಕ್ತ ತನಿಖೆ ಬಗ್ಗೆ ನಂಬಿಕೆ ಇಲ್ಲ ಎಂದು ತಿಳಿಸಿದರು.