ಕೇಜ್ರಿವಾಲ್‍ಗೆ ಮದ್ಯದ ಕಡೆ ಹೆಚ್ಚಿನ ಗಮನ: ಅಣ್ಣಾ ಹಜಾರೆ.

39

ನವದೆಹಲಿ: ಅರವಿಂದ್ ಕೇಜ್ರಿವಾಲ್ ಮದ್ಯದ ಕಡೆ ಹೆಚ್ಚಿನ ಗಮನಹರಿಸಿದ್ದರು. ಅಲ್ಲದೆ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ದೆಹಲಿ ಚುನಾವಣೆ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದು ಹೇಳಿದರು. ಈ ವಿಚಾರವನ್ನು ಕೇಜ್ರಿವಾಲ್ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಕಡಿಮೆ ಮತಗಳನ್ನು ಪಡೆಯುತ್ತಿದ್ದಾರೆ ಎಂದು ದೂರಿದರು. ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು ಆದರೆ ಅವರು ಆ ವಿಚಾರದ ಕಡೆಗೆ ತಲೆಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ. ಆದ್ದರಿಂದ ನಾನು ಆಪ್‍ನಿಂದ ದೂರ ಇದ್ದೇನೆ ಎಂದು ತಿಳಿಸಿದರು.