ನಮಗಾದ ಅಪಮಾನಕ್ಕೆ ನೇಣು ಹಾಕಿಕೊಳ್ಳಬೇಕಿತ್ತು: ಶಾಸಕ ಬಸನಗೌಡ ಯತ್ನಾಳ್.

23

ದಾವಣಗೆರೆ: ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ಆದರೆ, ನಾವು ಹಾಕಿಕೊಂಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹ ಪ್ರವೇಶವಿದೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇವೆ ಎಂದು ತಿಳಿಸಿದರು. ಮುಂದುವರೆದ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರವಾಗಿ ನಮ್ಮ ವಿರುದ್ಧದ ವರದಿಗಳು ಬರುತ್ತಿದೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ, ಇಲ್ಲವೋ ಎನ್ನುವುದು ನಿಮಗೆ ಏಕೆ ಹೇಳಲಿ. ನಾವು ದೆಹಲಿಗೆ ಹೋಗುತ್ತೇವೆ, ನನ್ನ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಹಾದಿ ಬೀದಿಯಲ್ಲಿ ಹಂದಿಗಳು ಹೇಳುತ್ತವೆ ಎಂದರೆ ಅವರಿಗೆ ನಾನೇಕೆ ಉತ್ತರ ನೀಡಲಿ. ದಾವಣಗೆರೆಯಲ್ಲಿ 2 ಹಂದಿಗಳು ಇವೆ. ಶಿವಾನಂದ ಸರ್ಕಲ್‍ನಲ್ಲಿ ವಿಜಯೇಂದ್ರ ಮನೆ ಮುಂದೆ ನೀವು ನಿಲ್ಲಿ ಅವರ ಗುಣಗಾನ ಮಾಡಿ ಎಂದು ಹೇಳಿದ್ದಾರೆ. ಇನ್ನು ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲಲು ಕಾರಣ ಅವರ ಭ್ರಷ್ಟಾಚಾರ . ಅದಕ್ಕಾಗಿ ರಾಜ್ಯದಲ್ಲಿ ಕೂಡ ಭ್ರಷ್ಟಾಚಾರ ರಹಿತವಾಗಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.