ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ  ನೀಡಿದ ವ್ಯಕ್ತಿಗೆ 29,000 ದಂಡ.

52

ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ಜೆಎಂಎಫ್‌ಸಿ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ.ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.