ಗಾಯಕ ಸಂದೇಶ್ ನೀರ್ ಮಾರ್ಗ ಅವರಿಗೆ ಕೊಟ್ಟಿಗೆಹಾರದಲ್ಲಿ ಸನ್ಮಾನ

3

ಕೊಟ್ಟಿಗೆಹಾರ: ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ ಅವರಿಗೆ ಕೊಟ್ಟಿಗೆಹಾರದಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳ ವತಿಯಿಂದ ಆತ್ಮೀಯ ಸನ್ಮಾನ ನಡೆಯಿತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂದೇಶ್ ನೀರ್ ಮಾರ್ಗ ಅವರು ಕೊಟ್ಟಿಗೆಹಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿ ಗೌರವಿಸಿದರು.

ಸಂದೇಶ್ ನೀರ್ ಮಾರ್ಗ ಅವರ ಸಂಗೀತ ಕ್ಷೇತ್ರದ ಸಾಧನೆ ಹಾಗೂ ಕಲಾ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ತಮ್ಮ ಗಾಯನದ ಮೂಲಕ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಅವರು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಈ ವೇಳೆ ಶುಭ ಹಾರೈಸಲಾಯಿತು.

ಸನ್ಮಾನ ಸ್ವೀಕರಿಸಿದ ಸಂದೇಶ್ ನೀರ್ ಮಾರ್ಗ ಅವರು ಅಭಿಮಾನಿಗಳು ಹಾಗೂ ಗ್ರಾಮಸ್ಥರು ತೋರಿದ ಪ್ರೀತಿ ಮತ್ತು ಗೌರವಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಸಂಜಯ್ ಕೊಟ್ಟಿಗೆಹಾರ, ಅಭಿಲಾಷ್, ಸಾಗರ್, ಗಿರೀಶ್, ವಿನಯ್, ಆದ್ಯ ಸೇರಿದಂತೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.