ಬೆಳಗಾವಿ: ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ಬಣಗಳ ನಡುವಿನ ಸೆಣಸಾಟದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತುಹಲಕ್ಕೆ ಕಾರಣವಾಗಿದೆ. ಬೆಳಗಾವಿಯ ತಹಶೀಲ್ದಾರ್ ಮಂಜುಳಾ ನಾಯಕ್ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪಿಎಲ್ಡಿ ಬ್ಯಾಂಕ್ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ನೀಡಿದೆ.










