ಬೆಂಗಳೂರು :ತೈಲ ದರಗಳ ಏರಿಕೆ ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್ ಗೆ ನನ್ನ ಮತ್ತು ಪಕ್ಷ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದು, ಭಾರತ ಬಂದ್‌ಗೆ ಜೆಡಿಎಸ್ ಪಕ್ಷವೂ ಬೆಂಬಲ ನೀಡಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ. ಆದ್ದರಿಂದ ನಾವು ಬೆಂಬಲ ನೀಡಿದ್ದೇವೆ ಎಂದು ದೇವೇಗೌಡರು ಹೇಳಿದರು.










