ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.-ಡಾ.ಜಿ ಪರಮೇಶ್ವರ್…

260
firstsuddi

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದು ತಮ್ಮ ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಲೋಕಸಭಾ ಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ.  ರಮೇಶ್ ಜಾರಕಿಹೊಳಿ ಪಕ್ಷವನ್ನು ಬಿಡುವುದಿಲ್ಲ. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಆದರೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಆಡಳಿತ ನಡೆಸುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.