ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ.- ಸಾ.ರಾ ಮಹೇಶ್…

584
firstsuddi

ಮೈಸೂರು: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಾ.ರಾ ಮಹೇಶ್ ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಸಹ 20 ವರ್ಷ ಬಿಜೆಪಿಯಲ್ಲೇ ಇದ್ದವನು. ರಾಜಕಾರಣ ಮಾಡಲು ನಮಗೂ ಬರುತ್ತದೆ. ಒಬ್ಬರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಜೆಡಿಎಸ್ ನಾಯಕರ ಶಕ್ತಿ ಏನೆಂದು ಗೊತ್ತಾಗುತ್ತದೆ, ನಾವು ಸುಮ್ಮನೆ ಕೂರುವುದಿಲ್ಲ. ಕೆಲವು ಬಿಜೆಪಿ ಮುಖಂಡರು ಅಧಿಕಾರದ ಆಸೆ ಇಟ್ಟುಕೊಂಡಿದ್ದು, ಕೆಲವರಿಗೆ ಇಲ್ಲಸಲ್ಲದ ಆಸೆ ತೋರಿಸಿ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳನ್ನು ನಡೆಯುತ್ತಿದೆ. ನಮ್ಮದು ಪ್ರಾದೇಶಿಕ ಪಕ್ಷವೇ ಆಗಿರಬಹುದು. ನಮ್ಮ ಪಕ್ಷದವರು ರಾಷ್ಟ್ರ ಮಟ್ಟದಲ್ಲಿ ಪ್ರಧಾನಿಯಾಗಿದ್ದಾರೆ. ಬಿಜೆಪಿಯ ಅನೇಕ ಶಾಸಕರು ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಾ.ರಾ ಮಹೇಶ್ ಎಚ್ಚರಿಕೆ ನೀಡಿದ್ದಾರೆ.