ಈಶಾನ್ಯ ರಾಜ್ಯದಲ್ಲಿ ಭೂಕಂಪನ…

319
firstsuddi

ನವದೆಹಲಿ: ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಭೂಕಂಪನದ ಅನುಭವ ಆಗಿದ್ದು,ಈಶಾನ್ಯ ರಾಜ್ಯ ಸೇರಿದಂತೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ, ಬಿಹಾರದಲ್ಲೂ ಭೂಕಂಪನದ ಅನುಭವ ಆಗಿದೆ. ಗುವಾಹಟಿಯಲ್ಲಿ 10 ಸೆಕೆಂಡ್ ಭೂಮಿ ನಡುಗಿದ ಅನುಭವ ಆಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಬೆಳಗಿನ ಜಾವ 5.15ರ ಸುಮಾರಿಗೆ ಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು ಎಂದು ತಿಳಿದು ಬಂದಿದೆ.