ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು…

329
firstsuddi

ಮಂಡ್ಯ: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ  ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದ್ದು, ರಕ್ಷಿತಾ(19) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದವರಾದ ಕೀರ್ತಿರಾಜ್ ಹಾಗೂ ರಕ್ಷಿತಾ  ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಮದುವೆ ನಂತರ ಮದ್ದೂರು ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ರಾತ್ರಿ ರಕ್ಷಿತಾ ನೇಣಿಗೆ ಶರಣಾಗಿದ್ದರೆ, ಪತಿ ಕೀರ್ತಿರಾಜ್ ನಾಪತ್ತೆಯಾಗಿದ್ದಾನೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.