ಬೋಸ್ಟನ್: ಅಮೆರಿಕದ ಬೋಸ್ಟನ್‍ನ ಮೂರು ನಗರದಲ್ಲಿ 70 ಕಡೆ ಅನಿಲ ಪೈಪ್‍ಗಳು ಸ್ಫೋಟಗೊಂಡ ಪರಿಣಾಮ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಲಾರೆನ್ಸ್, ಆಂಡೋವರ್ ಮತ್ತು ನಾರ್ಥ್ ಆಂಡೋವರ್ ನಗರಗಳಲ್ಲಿ ಗುರುವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ ಎಂದು ಮೆಸಾಚ್ಯುಸೆಟ್ಸ್ ಪೊಲೀಸರು ತಿಳಿಸಿದ್ದು, ಅನಿಲ ಸ್ಫೋಟಗೊಂಡ ಪ್ರದೇಶದಲ್ಲಿ ಭಾರಿ ಪ್ರಮಾಣದ ಅನಿಲ ಸೋರಿಕೆಯಾಗಿದ್ದು, ಸುಮಾರು 20 ಕಿ.ಮೀ ವ್ಯಾಪ್ತಿವರೆಗೂ ಅನಿಲ ಸೋರಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶಗಳಲ್ಲಿ ಇನ್ನಷ್ಟು ಸ್ಫೋಟಗಳು ಸಂಭವಿಸದಿರಲು ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸುವುದರೊಂದಿಗೆ ಗ್ಯಾಸ್ ಸರ್ವಿಸ್ ನಿಲ್ಲಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ.










