ಹರಿಯಾಣ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…

343
firstsuddi

ಹರಿಯಾಣ: 19 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ನಡೆದಿದ್ದು,  ಸಿಬಿಎಸ್‍ಇನಲ್ಲಿ ಟಾಪರ್ ಆಗಿರುವ ಸಂತ್ರಸ್ತೆ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಕೋಚಿಂಗ್ ಸೆಂಟರ್ ಗೆ ಹೋಗುತ್ತಿದ್ದಾಗ, ದಾರಿ ಮಧ್ಯೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈಕೆಯನ್ನು ಕಿಡ್ನಾಪ್ ಮಾಡಿದ್ದು, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕುಡಿಯಲು ನಿದ್ರಾಜನಕ ಹೊಂದಿರುವ ಪಾನೀಯವನ್ನು ಯುವತಿಗೆ ಬಲವಂತವಾಗಿ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ . ಬಳಿಕ ಆರೋಪಿಗಳು ಸಂತ್ರಸ್ತೆಯನ್ನು ಕಾನಿನಾ ಬಸ್ ನಿಲ್ದಾಣ ಬಳಿ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ. ಕೇಸ್ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.